ವಿಮೋಚನಕಾಂಡ 16:3 - ಕನ್ನಡ ಸತ್ಯವೇದವು C.L. Bible (BSI)3 “ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು. ಅಧ್ಯಾಯವನ್ನು ನೋಡಿ |
ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.