Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:35 - ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:35
16 ತಿಳಿವುಗಳ ಹೋಲಿಕೆ  

ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು;


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು