Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:4
17 ತಿಳಿವುಗಳ ಹೋಲಿಕೆ  

ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು;


ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.


ಆದರು ಮೇಘಮಂಡಲಕೆ ಆಜ್ಞೆಯಿತ್ತನಾತ I ಅಂತರಿಕ್ಷದಾ ದ್ವಾರಗಳನು ತೆರೆದನಾತ II


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು