Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:7 - ಕನ್ನಡ ಸತ್ಯವೇದವು C.L. Bible (BSI)

7 ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:7
17 ತಿಳಿವುಗಳ ಹೋಲಿಕೆ  

ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.


ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.


“ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.


ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು