ವಿಮೋಚನಕಾಂಡ 16:8 - ಕನ್ನಡ ಸತ್ಯವೇದವು C.L. Bible (BSI)8 ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು. ಅಧ್ಯಾಯವನ್ನು ನೋಡಿ |