Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:9 - ಕನ್ನಡ ಸತ್ಯವೇದವು C.L. Bible (BSI)

9 ಆರೋನನಿಗೆ ಮೋಶೆ, “ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ‘ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ಎಂದು ಆಜ್ಞಾಪಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಮೋಶೆಯು ಆರೋನನಿಗೆ - ನೀನು ಇಸ್ರಾಯೇಲ್ಯರ ಸಮೂಹದ ಬಳಿಗೆ ಹೋಗಿ ಅವರಿಗೆ - ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನಾದದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಕೂಡಿ ಬರಬೇಕೆಂದು ಆಜ್ಞಾಪಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗೊಣಗುಟ್ಟುವಿಕೆಯನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:9
5 ತಿಳಿವುಗಳ ಹೋಲಿಕೆ  

ಮೋಶೆ ಕೋರಹನಿಗೆ, “ನೀನೂ ನಿನ್ನ ಪಂಗಡದವರು ಮತ್ತು ಆರೋನನು ನಾಳೆ ಸರ್ವೇಶ್ವರನ ಸನ್ನಿಧಿಗೆ ಬರಬೇಕು.


ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.


ಮರುಭೂಮಿಯಲ್ಲಿ ಇಸ್ರಯೇಲರ ಸಮಾಜವೆಲ್ಲ ಮೋಶೆ ಮತ್ತು ಆರೋನರ ವಿರುದ್ಧ ಗೊಣಗುಟ್ಟಿತು.


ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.


“ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು