Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಇಸ್ರಾಯೇಲ್ಯರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಪ್ರಕಾರ ಸೀನ್ ಎಂಬ ಅರಣ್ಯದಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀವಿುನಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:1
8 ತಿಳಿವುಗಳ ಹೋಲಿಕೆ  

ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.


ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.


ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.


ಜನರಿಗೆ ನೀರು ಇಲ್ಲದೆಹೋಯಿತು. ಅವರು ಮೋಶೆ ಮತ್ತು ಆರೋನರ ವಿರುದ್ಧ ಸಭೆಸೇರಿ ಮೋಶೆಯ ಸಂಗಡ ವಾದಿಸತೊಡಗಿದರು:


ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.


ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು