Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:10 - ಕನ್ನಡ ಸತ್ಯವೇದವು C.L. Bible (BSI)

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು; ಮೋಶೆಯೂ ಆರೋನನೂ ಹೂರನೂ ಈ ಮೂವರು ಗುಡ್ಡದ ತುದಿಗೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋಶುವನು ಮೋಶೆಯ ಮಾತಿಗೆ ವಿಧೇಯನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:10
9 ತಿಳಿವುಗಳ ಹೋಲಿಕೆ  

ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.


ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.


“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;


ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲಾ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು.


ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು