Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:15 - ಕನ್ನಡ ಸತ್ಯವೇದವು C.L. Bible (BSI)

15 ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:15
9 ತಿಳಿವುಗಳ ಹೋಲಿಕೆ  

ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.


ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು