Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:3 - ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:3
9 ತಿಳಿವುಗಳ ಹೋಲಿಕೆ  

“ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.


ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?


ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.


ನರಳಿದರು ಹಸಿವೆ ಬಾಯಾರಿಕೆಯಿಂದ I ಸೊರಗಿದರು ಮನೋಯಾತನೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು