Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:4
11 ತಿಳಿವುಗಳ ಹೋಲಿಕೆ  

ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಇವೆಲ್ಲವನ್ನೂ ನಿರ್ಮಿಸಿದವನು ನಾನೇ ಅಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಸರ್ವೇಶ್ವರ, ಪ್ರವಾದಿಯ ಪ್ರವಚನವೊಂದರಲ್ಲಿ.”


ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.


ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ?


ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.


ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು.


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು