Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:6 - ಕನ್ನಡ ಸತ್ಯವೇದವು C.L. Bible (BSI)

6 ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:6
24 ತಿಳಿವುಗಳ ಹೋಲಿಕೆ  

ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ


ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


“ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.


(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು