Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:9 - ಕನ್ನಡ ಸತ್ಯವೇದವು C.L. Bible (BSI)

9 ‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆಯು ಯೆಹೋಶುವನಿಗೆ - ನೀನು ಭಟರನ್ನು ಆದುಕೊಂಡು ನಾಳೆ ನಮ್ಮ ಮುಂದೆ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡಬೇಕು; ನಾನು ದೇವದಂಡವನ್ನು ಕೈಯಲ್ಲಿ ಹಿಡುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:9
18 ತಿಳಿವುಗಳ ಹೋಲಿಕೆ  

ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.


ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.


ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.


ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.


ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.


ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.


ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.


ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.


ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು