Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:1 - ಕನ್ನಡ ಸತ್ಯವೇದವು C.L. Bible (BSI)

1 ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:1
33 ತಿಳಿವುಗಳ ಹೋಲಿಕೆ  

ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II


ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು