Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:10 - ಕನ್ನಡ ಸತ್ಯವೇದವು C.L. Bible (BSI)

10 “ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಗುಪ್ತ್ಯರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇತ್ರೋನನು, “ಯೆಹೋವನನ್ನು ಸ್ತುತಿಸಿರಿ! ಆತನು ನಿಮ್ಮನ್ನು ಫರೋಹನಿಂದಲೂ ಈಜಿಪ್ಟಿನಿಂದಲೂ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇತ್ರೋವನು, “ಈಜಿಪ್ಟಿನವರ ಕೈಗೂ ಫರೋಹನ ಕೈಗೂ ಈಜಿಪ್ಟಿನವರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:10
16 ತಿಳಿವುಗಳ ಹೋಲಿಕೆ  

ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು