Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:11 - ಕನ್ನಡ ಸತ್ಯವೇದವು C.L. Bible (BSI)

11 ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:11
30 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಗೊತ್ತೆನಗೆ ನಮ್ಮ ಪ್ರಭು ಘನವಂತನೆಂದು I ಸಕಲ ದೇವರುಗಳಿಗಿಂತಲು ಉನ್ನತನೆಂದು I


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


"ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು