Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:13 - ಕನ್ನಡ ಸತ್ಯವೇದವು C.L. Bible (BSI)

13 ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಾರಣೆದಿನ ಮೋಶೆ ಜನರಿಗೆ ನ್ಯಾಯತೀರಿಸುವದಕ್ಕಾಗಿ ಕೂತಿರಲು ಪ್ರಾತಃಕಾಲದಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:13
9 ತಿಳಿವುಗಳ ಹೋಲಿಕೆ  

ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.


“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.


ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.


ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು