Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:14 - ಕನ್ನಡ ಸತ್ಯವೇದವು C.L. Bible (BSI)

14 ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೋಶೆಯು ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ಅವನ ಮಾವನು ನೋಡಿ ಅವನಿಗೆ - ನೀನು ಯಾತಕ್ಕೆ ಜನರಿಗೊಸ್ಕರ ಇಷ್ಟು ಪ್ರಯಾಸಪಡುತ್ತಿ? ಪ್ರಾತಃಕಾಲ ಮೊದಲುಗೊಂಡು ಸಾಯಂಕಾಲದವರೆಗೂ ಜನರು ನಿನ್ನ ಹತ್ತಿರ ನಿಲ್ಲುತ್ತಾರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ರೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇತ್ರೋವನು ಮೋಶೆಯು ಜನರಿಗಾಗಿ ಮಾಡುವುದನ್ನೆಲ್ಲಾ ನೋಡಿದಾಗ, ಅವನು ಮೋಶೆಗೆ, “ಇದೇನು ಜನರಿಗೆ ನೀನು ಮಾಡುವುದು? ಏಕೆ ನೀನೊಬ್ಬನೇ ನ್ಯಾಯಾಧೀಶನಾಗಿ ಕೂತಿರಲಾಗಿ, ಜನರು ಬೆಳಗಿನಿಂದ ಸಂಜೆಯವರೆಗೆ ನಿನ್ನ ಬಳಿಯಲ್ಲಿ ನಿಂತಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:14
6 ತಿಳಿವುಗಳ ಹೋಲಿಕೆ  

ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.


ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು