Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:19 - ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:19
15 ತಿಳಿವುಗಳ ಹೋಲಿಕೆ  

ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:


ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಮೋಶೆ ತನ್ನ ಮಾವನ ಸಲಹೆಯನ್ನು ಒಪ್ಪಿಕೊಂಡನು. ಅವನು ಹೇಳಿದಂತೆಯೇ ಮಾಡಿದನು.


ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು