Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:25 - ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಇಸ್ರಾಯೇಲ್ಯರೆಲ್ಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:25
9 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಮೋಶೆ ತನ್ನ ಮಾವನ ಸಲಹೆಯನ್ನು ಒಪ್ಪಿಕೊಂಡನು. ಅವನು ಹೇಳಿದಂತೆಯೇ ಮಾಡಿದನು.


ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;


ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಎಣಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು