Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:3 - ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ತಾನು ಅನ್ಯದೇಶದ ಪ್ರವಾಸಿ ಎಂದು ಹೇಳಿ ತನ್ನ ಹಿರಿಯ ಮಗನಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ - ನಾನು ಅನ್ಯದೇಶದ ಪ್ರವಾಸಿಯಾಗಿದ್ದೇನೆಂದು ಹೇಳಿ ತನ್ನ ಹಿರೀ ಮಗನಿಗೆ ಗೇರ್ಷೋಮೆಂದು ಹೆಸರಿಟ್ಟಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇತ್ರೋನನು ಮೋಶೆಯ ಇಬ್ಬರು ಗಂಡುಮಕ್ಕಳನ್ನೂ ಕರೆದುಕೊಂಡು ಬಂದನು. ಮೊದಲಿನ ಮಗನ ಹೆಸರು ಗೇರ್ಷೋಮ್. ಅವನು ಹುಟ್ಟಿದಾಗ ಮೋಶೆಯು, “ನಾನು ಪರದೇಶದಲ್ಲಿ ಅಪರಿಚಿತನಾಗಿದ್ದೇನೆ” ಎಂದು ಹೇಳಿ ಆ ಹೆಸರನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಶೆಯು, “ನಾನು ಪರದೇಶದಲ್ಲಿ ಅನ್ಯನಾಗಿದ್ದೆನು,” ಎಂದು ಹೇಳಿ ಆ ಪುತ್ರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:3
8 ತಿಳಿವುಗಳ ಹೋಲಿಕೆ  

ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.


ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಮೋಶೆಯ ಮಕ್ಕಳು ಗೇರ್ಷೋಮ್ ಹಾಗೂ ಎಲೀಯೆಜೆರ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು