ವಿಮೋಚನಕಾಂಡ 18:4 - ಕನ್ನಡ ಸತ್ಯವೇದವು C.L. Bible (BSI)4 ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು ಎಂದು ಹೇಳಿ ಕಿರೀ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇನ್ನೊಬ್ಬ ಮಗನ ಹೆಸರು ಎಲೀಯೆಜೆರ್. ಇವನು ಹುಟ್ಟಿದಾಗ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯ ಮಾಡಿ ಈಜಿಪ್ಟಿನ ಅರಸನಿಂದ ರಕ್ಷಿಸಿದನು” ಎಂದು ಹೇಳಿ ಆ ಹೆಸರನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು. ಅಧ್ಯಾಯವನ್ನು ನೋಡಿ |