Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:7 - ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:7
23 ತಿಳಿವುಗಳ ಹೋಲಿಕೆ  

ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.


ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಊರೀಯನು ಬಂದಾಗ ದಾವೀದನು, “ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ?” ಎಂದು ವಿಚಾರಿಸಿದನು.


ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.


ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು.


ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.


ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


“ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು.


ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.


ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು