Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:9 - ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:9
8 ತಿಳಿವುಗಳ ಹೋಲಿಕೆ  

ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು