ವಿಮೋಚನಕಾಂಡ 19:13 - ಕನ್ನಡ ಸತ್ಯವೇದವು C.L. Bible (BSI)13 ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು. ಅಧ್ಯಾಯವನ್ನು ನೋಡಿ |