Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:19 - ಕನ್ನಡ ಸತ್ಯವೇದವು C.L. Bible (BSI)

19 ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ ಮೋಶೆಯು [ದೇವರ ಸಂಗಡ] ಮಾತಾಡಿದನು; ಆಗ ದೇವರು ಬಾಯಿ ಮಾತಿನಿಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:19
9 ತಿಳಿವುಗಳ ಹೋಲಿಕೆ  

“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”


ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು