Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:2 - ಕನ್ನಡ ಸತ್ಯವೇದವು C.L. Bible (BSI)

2 ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ರೆಫೀದೀಮನ್ನು ಬಿಟ್ಟು ಆ ಅರಣ್ಯಕ್ಕೆ ಬಂದಾಗ ಅಲ್ಲಿ ಬೆಟ್ಟಕ್ಕೆ ಎದುರಾಗಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ರೆಫೀದೀಮನ್ನು ಬಿಟ್ಟು ಸೀನಾಯ್ ಮರುಭೂಮಿಗೆ ಬಂದಿದ್ದರು. ಅಲ್ಲಿ ಅವರು ಬೆಟ್ಟದ ಬಳಿ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ರೆಫೀದೀಮಿನಿಂದ ಹೊರಟು, ಸೀನಾಯಿ ಮರುಭೂಮಿಗೆ ಬಂದು, ಮರುಭೂಮಿಯಲ್ಲಿ ಡೇರೆ ಹಾಕಿ, ಬೆಟ್ಟಕ್ಕೆದುರಾಗಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:2
10 ತಿಳಿವುಗಳ ಹೋಲಿಕೆ  

ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಮೋಶೆಯ ಮಾವ ಇತ್ರೋ, ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.


ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.


ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.


“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲೂ


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು