Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:22 - ಕನ್ನಡ ಸತ್ಯವೇದವು C.L. Bible (BSI)

22 ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವಸನ್ನಿಧಿಗೆ ಸೇರುವ ಯಾಜಕರೂ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ಯೆಹೋವನು ಫಕ್ಕನೆ ಸಂಹಾರಮಾಡಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:22
17 ತಿಳಿವುಗಳ ಹೋಲಿಕೆ  

ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.


ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;


ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


“ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು