ವಿಮೋಚನಕಾಂಡ 19:24 - ಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನು ಅವನಿಗೆ - ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರೂ ಜನರೂ ಆ ಮೇರೆಯನ್ನು ದಾಟಿ ಯೆಹೋವನ ಹತ್ತಿರ ಬರಕೂಡದು; ದಾಟಿದರೆ ಯೆಹೋವನು ಅವರನ್ನು ಫಕ್ಕನೆ ಸಂಹಾರ ಮಾಡಾನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು. ಅಧ್ಯಾಯವನ್ನು ನೋಡಿ |