ವಿಮೋಚನಕಾಂಡ 19:4 - ಕನ್ನಡ ಸತ್ಯವೇದವು C.L. Bible (BSI)4 'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಏನಂದರೆ - ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. ಅಧ್ಯಾಯವನ್ನು ನೋಡಿ |