Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:9
25 ತಿಳಿವುಗಳ ಹೋಲಿಕೆ  

ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರಾ, ರವಿಯನ್ನು ಆಗಸದಲ್ಲಿ ಸ್ಥಿರವಾಗಿರಿಸಿದ ನೀವು ಆರಿಸಿಕೊಂಡಿರಿ ಕರಿಮೋಡದಲಿ ವಾಸಿಸಲು.


ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು : “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.


ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.


ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು