ವಿಮೋಚನಕಾಂಡ 2:19 - ಕನ್ನಡ ಸತ್ಯವೇದವು C.L. Bible (BSI)19 ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು. ಅಧ್ಯಾಯವನ್ನು ನೋಡಿ |