ವಿಮೋಚನಕಾಂಡ 2:20 - ಕನ್ನಡ ಸತ್ಯವೇದವು C.L. Bible (BSI)20 ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರ ತಂದೆ ಅವರಿಗೆ - ಆ ಮನುಷ್ಯನೆಲ್ಲಿ? ಅವನನ್ನು ಯಾಕೆ ಬಿಟ್ಟು ಬಂದಿರಿ? ಊಟ ಮಾಡುವದಕ್ಕೆ ಕರೆಯಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |