Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:21 - ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:21
15 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.


ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ" ಎಂದು ಹೆಸರಿಟ್ಟಳು.


ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು.


ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು