Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:23 - ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:23
31 ತಿಳಿವುಗಳ ಹೋಲಿಕೆ  

ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.


ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ಈಜಿಪ್ಟಿನವರು ಗುಲಾಮರನ್ನಾಗಿಸಿಕೊಂಡಿರುವ ಇಸ್ರಯೇಲರ ಗೋಳು ನನಗೆ ಕೇಳಿಸಿದೆ. ನಾನು ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡಿದ್ದೇನೆ.


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ಕೂಗು ಸೇರಲಿ ನಿನ್ನ ಬಳಿಗೆ II


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು