Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:3 - ಕನ್ನಡ ಸತ್ಯವೇದವು C.L. Bible (BSI)

3 ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:3
10 ತಿಳಿವುಗಳ ಹೋಲಿಕೆ  

ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.


ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


“ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;


ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.


ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು