Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:5 - ಕನ್ನಡ ಸತ್ಯವೇದವು C.L. Bible (BSI)

5 ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಷ್ಟರಲ್ಲಿ ಫರೋಹನ ಕುಮಾರ್ತೆಯು ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು; ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನಲ್ಲಿ ಪೆಟ್ಟಿಗೆಯನ್ನು ಕಂಡು ದಾಸಿಯನ್ನು ಕಳುಹಿಸಿ ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:5
12 ತಿಳಿವುಗಳ ಹೋಲಿಕೆ  

ಅನಂತರ ಅವನನ್ನು ಮನೆಯಿಂದ ದೂರವಿಟ್ಟಿದ್ದಾಗ, ಫರೋಹನ ಮಗಳು ಅವನನ್ನು ತನ್ನ ಪಾಲನೆಗೆ ತೆಗೆದುಕೊಂಡು ಸ್ವಂತ ಮಗನಂತೆ ಸಾಕಿದಳು.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.


ಬೆಳಿಗ್ಗೆ ನೀನು ಫರೋಹನ ಬಳಿಗೆ ಹೋಗು. ಆಗ ಅವನು ನದಿಗೆ ಹೋಗುತ್ತಿರುತ್ತಾನೆ. ಅವನನ್ನು ಭೇಟಿಯಾಗಲು ನೈಲ್ ನದಿ ತೀರದಲ್ಲೆ ನಿಂತುಕೊಂಡಿರು. ಸರ್ಪವಾಗಿ ಮಾರ್ಪಟ್ಟ ಆ ಕೋಲು ನಿನ್ನ ಕೈಯಲ್ಲಿರಲಿ.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು