ವಿಮೋಚನಕಾಂಡ 2:7 - ಕನ್ನಡ ಸತ್ಯವೇದವು C.L. Bible (BSI)7 ಆ ಮಗುವಿನ ಅಕ್ಕ ಬಂದು, “ನಿಮ್ಮ ಪರವಾಗಿ ಈ ಕೂಸನ್ನು ಮೊಲೆಕೊಟ್ಟು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?” ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗಲೇ ಅದರ ಅಕ್ಕ ಬಂದು ಫರೋಹನ ಕುಮಾರ್ತೆಗೆ - ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಲೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು. ಅಧ್ಯಾಯವನ್ನು ನೋಡಿ |