Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:10 - ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:10
16 ತಿಳಿವುಗಳ ಹೋಲಿಕೆ  

“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.


ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ಆರು ದಿವಸ ಅದನ್ನು ಕೂಡಿಸಬಹುದು. ಏಳನಯ ದಿನ ಸಬ್ಬತ್ ಆದುದರಿಂದ ಅದು ದೊರೆಯುವುದೇ ಇಲ್ಲ,” ಎಂದು ಹೇಳಿದನು.


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.


“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು