ವಿಮೋಚನಕಾಂಡ 20:11 - ಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು. ಅಧ್ಯಾಯವನ್ನು ನೋಡಿ |