Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:17 - ಕನ್ನಡ ಸತ್ಯವೇದವು C.L. Bible (BSI)

17 ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:17
41 ತಿಳಿವುಗಳ ಹೋಲಿಕೆ  

“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ !


ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ".


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು