Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:2 - ಕನ್ನಡ ಸತ್ಯವೇದವು C.L. Bible (BSI)

2 “ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:2
50 ತಿಳಿವುಗಳ ಹೋಲಿಕೆ  

‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.”


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ದೇವರು ಕೊಟ್ಟ ಆಜ್ಞೆಗಳು ಇವು:


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.


“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.


ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.


ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.


ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು