ವಿಮೋಚನಕಾಂಡ 20:4 - ಕನ್ನಡ ಸತ್ಯವೇದವು C.L. Bible (BSI)4 ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;