Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:7
25 ತಿಳಿವುಗಳ ಹೋಲಿಕೆ  

‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.


ಆಗ ಅವರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಪ್ರಮಾಣದಂತೆ ನಡೆದುಕೊಳ್ಳುತ್ತೇವೆ.


ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II


ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು