ವಿಮೋಚನಕಾಂಡ 21:13 - ಕನ್ನಡ ಸತ್ಯವೇದವು C.L. Bible (BSI)13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು. ಅಧ್ಯಾಯವನ್ನು ನೋಡಿ |