Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:2 - ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:2
18 ತಿಳಿವುಗಳ ಹೋಲಿಕೆ  

“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ನೀವು ಕ್ರಯಕ್ಕೆ ಕೊಂಡ ಜೀತಗಾರನು ಸುನ್ನತಿ ಮಾಡಿಸಿಕೊಂಡವನಾದರೆ ಅಂಥವನು ಅದರಲ್ಲಿ ಭಾಗವಹಿಸಬಹುದು.


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ


“ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.


ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.


ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೋಗಲಿ. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಲಿ.


“ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು