Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:33 - ಕನ್ನಡ ಸತ್ಯವೇದವು C.L. Bible (BSI)

33 “ಒಬ್ಬನು ಗುಣಿ ತೆಗೆದುದರಿಂದ, ಇಲ್ಲವೆ ಗುಣಿ ಅಗೆದು ಮುಚ್ಚದೆ ಹೋದುದರಿಂದ, ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಒಬ್ಬನು ಕುಣಿತೆಗೆದದರಿಂದ ಇಲ್ಲವೆ ಕುಣಿ ಅಗೆದು ಮುಚ್ಚದೆಹೋದದರಿಂದ ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:33
9 ತಿಳಿವುಗಳ ಹೋಲಿಕೆ  

ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.


ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II


ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.


ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.


ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು