Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:20 - ಕನ್ನಡ ಸತ್ಯವೇದವು C.L. Bible (BSI)

20 “ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:20
20 ತಿಳಿವುಗಳ ಹೋಲಿಕೆ  

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.


ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.


“ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು