Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:22 - ಕನ್ನಡ ಸತ್ಯವೇದವು C.L. Bible (BSI)

22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:22
23 ತಿಳಿವುಗಳ ಹೋಲಿಕೆ  

ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?


ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ.


ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.


ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.


ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.”


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು