Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:24 - ಕನ್ನಡ ಸತ್ಯವೇದವು C.L. Bible (BSI)

24 ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಕೋಪಿಸಿಕೊಂಡು ನಿಮ್ಮನ್ನು ಶತ್ರುಗಳ ಕತ್ತಿಯಿಂದ ಸಂಹಾರಮಾಡಿಸುವೆನು; ನಿಮ್ಮ ಹೆಂಡತಿಯರು ವಿಧವೆಗಳಾಗುವರು, ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:24
21 ತಿಳಿವುಗಳ ಹೋಲಿಕೆ  

ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.


ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.


ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು